News Karnataka Kannada
Saturday, April 27 2024
ಬೆಂಗಳೂರು

ಬೆಂಗಳೂರು: ಖಾಸಗಿ ಬಸ್ ಹರಿದು ಬೈಕ್ ಸವಾರ ಸಾವು

ನಾಗರಬಾವಿ ರಿಂಗ್ ರಸ್ತೆಯ ಮಲೆಮಹದೇಶ್ವರ ದೇವಸ್ಥಾನದ ಬಳಿ ಖಾಸಗಿ ಬಸ್  ಹರಿದು ಬೈಕ್ ಸವಾರ ಸಾವನ್ನಪ್ಪಿದ ಘಟನೆ  ನಡೆದಿದೆ.
Photo Credit : News Kannada

ಬೆಂಗಳೂರು: ನಾಗರಬಾವಿ ರಿಂಗ್ ರಸ್ತೆಯ ಮಲೆಮಹದೇಶ್ವರ ದೇವಸ್ಥಾನದ ಬಳಿ ಖಾಸಗಿ ಬಸ್  ಹರಿದು ಬೈಕ್ ಸವಾರ ಸಾವನ್ನಪ್ಪಿದ ಘಟನೆ  ನಡೆದಿದೆ.

ಮುರಳಿ (40) ಮೃತ ಬೈಕ್ ಸವಾರ.

ಮುರಳಿ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ವೇಗವಾಗಿ ಬಂದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಬಸ್ ಮುರಳಿ ತಲೆಯ ಮೇಲೆ ಹರಿದಿದೆ. ಇದರಿಂದ ಮುರಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸದ್ಯ ಬಸ್ ಚಾಲಕನನ್ನು ಜ್ಞಾನಭಾರತಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ ಮುರಳಿ ಮೃತದೇಹವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಜ್ಞಾನಭಾರತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು