Ad

ಬೈಕ್​ ಸ್ಕಿಡ್ : ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್​ ಸ್ಕಿಡ್ ಆಗಿ ಬಿದ್ದು ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಮಧ್ಯರಾತ್ರಿ ನಡೆದಿದೆ.

ಬೆಂಗಳೂರು: ಬೈಕ್​ ಸ್ಕಿಡ್ ಆಗಿ ಬಿದ್ದು ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಮಧ್ಯರಾತ್ರಿ ನಡೆದಿದೆ.

Ad
300x250 2

ಕುಮಾರ್ (30) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ನವೀನ್ (20) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಇಬ್ಬರು ರಾತ್ರಿ 1:30ರ ಸುಮಾರಿಗೆ ಬೈಕ್​ನಲ್ಲಿ ವೇಗವಾಗಿ ಹೋಗುವಾಗ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಬೈಕ್​ ಸ್ಕಿಡ್ ಆಗಿ ಬಿದ್ದಿದೆ.

ಇದರಿಂದ ಸ್ಥಳದಲ್ಲೇ ಕುಮಾರ್ ಸಾವನ್ನಪ್ಪಿದ್ದು ನವೀನ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಡಿವಾಳ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Ad
Ad
Nk Channel Final 21 09 2023
Ad