Bengaluru 23°C
Ad

ಬಿಟ್ ಕಾಯಿನ್ ಹಗರಣ ಪ್ರಕರಣ: ಇನ್ಸ್​ಪೆಕ್ಟರ್ ಚಂದ್ರಾಧರ್ ನನ್ನು ಬಂಧಿಸಿದ ಸಿಐಡಿ ಪೊಲೀಸರು

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು​ ಬಂಧಿಸಿರುವ ಘಟನೆ ನಡೆದಿದೆ.

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು​ ಬಂಧಿಸಿರುವ ಘಟನೆ ನಡೆದಿದೆ.

ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಚಂದ್ರಾಧರ್, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್​ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚಂದ್ರಾಧರ್ ಅವರನ್ನು ಸುಧೀರ್ಘ ವಿಚಾರಣೆ ನಡೆಸಿ ಬಂಧಿಸಲಾಗಿದೆ.

ಬಿಟ್ ಕಾಯಿನ್​ ಹಗರಣದದಲ್ಲಿ ಸಿಐಡಿಯ ಎಸ್ಐಟಿ ಅಧಿಕಾರಿಗಳು ದಿಟ್ಟ ಹೆಜ್ಜೆಯಟ್ಟಿದ್ದು, 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗುತ್ತಿದೆ.

ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.

 

 

Ad
Ad
Nk Channel Final 21 09 2023
Ad