ಯಾವುದೇ ಕ್ಷಣದಲ್ಲಿ ಬಿಜೆಪಿ ಪಟ್ಟಿ ಘೋಷಣೆ, ಒಂದೇ ಪಟ್ಟಿಯಲ್ಲಿ 175 ಅಭ್ಯರ್ಥಿಗಳ ಹೆಸರು

ಬೆಂಗಳೂರು: ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಇಂದು ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ನಿನ್ನೆ ತಡರಾತ್ರಿ ವರೆಗೆ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಒಂದೇಟಿಗೆ 175 ಅಭ್ಯರ್ಥಿಗಳ ಪಟ್ಟಿಯನ್ನ ರೆಡಿ ಮಾಡಿದ್ದಾರೆ. ಯಾರಿಗೆ ಕೊಡಬೇಕು? ಯಾರಿಗೆ ಕೊಡಬಾರದು.? ಬಂಡಾಯ ಶಮನ ಮಾಡುವುದು ಹೇಗೆ? ಸರ್ವೆ ರಿಪೋರ್ಟ್ ಏನು ಹೇಳುತ್ತದೆ ಹೀಗೆ ಎಲ್ಲವನ್ನೂ ಅಳೆದು ತೂಗಿ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು, ಟಿಕೆಟ್​ ಘೋಷಣೆಗೂ ಮುನ್ನ ಬಿಜೆಪಿ ನಾಯಕರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ.

ಇಂದು ದಿಲ್ಲಿಯಲ್ಲಿ ಧರ್ಮೇಂದ್ರ ಪ್ರಧಾನ್​ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಳಿಕ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಾಯಕರು ಸುದ್ದಿಗೋಷ್ಟಿ ನಡೆಸಲಿದ್ದಾರೆ. ಈ ವೇಳೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸದೀಯ ಮಂಡಳಿ ಸಭೆ ನಡೆದಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಂಬಂಧ ಸುದೀರ್ಘವಾಗಿ ಎರಡು ಗಂಟೆ ಕಾಲ ಚರ್ಚೆ ನಡೆದಿದೆ.15-20 ಹಾಲಿ ಶಾಸಕರು ಟಿಕೆಟ್‌ ಕಳೆದುಕೊಳ್ಳುವುದ ಖಚಿತ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಕೇಸರಿ ಪಾಳಯದಲ್ಲಿ ಕಂಪನ ಎದ್ದಿದ್ದು, ಯಾರಿಗೆ ಟಿಕೆಟ್ ಮಿಸ್ಸಾಗುತ್ತೋ ಎನ್ನುವ ತಳಮಳ ಶುರುವಾಗಿದೆ.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

53 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

1 hour ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago