Bengaluru 25°C
Ad

ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯಗೆ 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ

Thejashwi

ಬೆಂಗಳೂರು: ದೇಶಾದ್ಯಂತ ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. ತೇಜಸ್ವಿ ಸೂರ್ಯ 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ 92,840 ಮತಗಳನ್ನು ಪಡೆದುಕೊಂಡಿದ್ದರೆ, ಸೌಮ್ಯ ರೆಡ್ಡಿ 38,914 ಮತಗಳನ್ನು ಪಡೆದಿದ್ದಾರೆ. ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಈವರೆಗೆ ನಡೆದಿರುವ 13 ಚುನಾವಣೆಗಳಲ್ಲಿ ಕಾಂಗ್ರೆಸ್​ ಕೇವಲ ಎರಡು ಬಾರಿ ಮಾತ್ರ ಗೆದ್ದಿದೆ.

Ad
Ad
Nk Channel Final 21 09 2023
Ad