News Karnataka Kannada
Tuesday, April 30 2024
ಬೆಂಗಳೂರು

ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಬಿಜೆಪಿ ‘ಗ್ರಾಮ ಚಲೋ ಅಭಿಯಾನ’

Bjp
Photo Credit : News Kannada

ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಮೂರು ದಿನದ ಕಾರ್ಯಕ್ರಮದಲ್ಲಿ 42000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ 28,000 ಹಳ್ಳಿಗಳು, 19000 ನಗರ ಬೂತ್ ಗಳಲ್ಲಿ 42000 ಕಾರ್ಯಕರ್ತರು ಮೂರು ದಿನ ನಿರಂತರವಾಗಿ ಅಭಿಯಾನದಲ್ಲಿ ಭಾಗವಹಿಸುವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಅಭಿಯಾನದ ಮೂಲಕ ಪ್ರತಿ ಗ್ರಾಮ ಮನೆಗೆ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಲಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು