News Karnataka Kannada
Monday, April 29 2024
ಬೆಂಗಳೂರು

ಗೂಂಡಾ ರಾಜಕಾರಣ ಮಾಡುತ್ತಿದ್ದ ಬಿಜೆಪಿ ತನ್ನ ಹಳೆ ಚಾಳಿ ಬಿಟ್ಟಿಲ್ಲ: ರಮೇಶ್‌ ಬಾಬು

BJP has not given up its old habit of indulging in goonda politics: Ramesh Babu
Photo Credit : News Kannada

ಬೆಂಗಳೂರು: ಕೇಂದ್ರ ಸಚಿವ ಭಗವಂತ ಖೂಬಾ ಅವರಿಂದ ನನಗೆ ಜೀವ ಬೆದರಿಕೆ ಹಾಕಲಾಗಿದೆ, ನನ್ನ ಪ್ರಾಣಕ್ಕೆ ಆಪತ್ತಿದೆ ಎಂದು ಔರಾದ್‌ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌವ್ಹಾಣ್‌ ಅವರು ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ನಾಯಕರೇ ಪ್ರಾಣಭಯದಲ್ಲಿ ಬದುಕುತ್ತಿದ್ದಾರೆ.

ಚುನಾವಣೆಗೂ ಮೊದಲು ಗೂಂಡಾ ರಾಜಕಾರಣ ಮಾಡುತ್ತಿದ್ದ ಬಿಜೆಪಿ, ಚುನಾವಣೆಯಲ್ಲಿ ಸೋತ ನಂತರವೂ ತನ್ನ ಹಳೆಯ ಚಾಳಿ ಬಿಟ್ಟಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಮೇಶ್‌ ಬಾಬು ವಾಗ್ದಾಳಿ ನಡೆಸಿದರು.

ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಶಾಸಕ ಪ್ರಭು ಚೌವ್ಹಾಣ್‌ ಅವರು ಕೇಂದ್ರ ಸಚಿವ ಭಗವಂತ ಖೂಬಾ ಮೇಲೆ ಆರೋಪ ಮಾಡಿದರೂ ಬಿಜೆಪಿಯಲ್ಲಿ ದಲಿತ ಶಾಸಕನ ಪರ ನಿಲ್ಲಲು ಯಾರೂ ಸಿದ್ಧರಿಲ್ಲ. ವಿಧಾನಸಭಾ ಚುನಾವಣೆಯ ಮೊದಲು ಹಾಗು ನಂತರವೂ ಬಿಜೆಪಿ ಅಪರಾಧಗಳಿಗೆ, ಅಪರಾಧಿಗಳಿಗೆ ಕುಮ್ಮಕ್ಕು ನೀಡುವ ಕೆಲಸ ಮಾಡಿಕೊಂಡು ಬರುತ್ತಿದೆ.

ಬೀದರ್‌ ಜಿಲ್ಲಾ ಎಸ್‌ಪಿಗೆ ಭಗವಂತ ಖೂಬಾ ಅವರು ದೂರನ್ನು ಕೊಟ್ಟಿದ್ದು, ಅದರಲ್ಲಿ “ಪ್ರಭು ಚೌವ್ಹಾಣ್‌ ಅವರಿಗೆ ಏನಾದರೂ ತೊಂದರೆಯಾದರೆ ಅದಕ್ಕೆ ನಾನು ಹೊಣೆಗಾರನ್ನಲ್ಲ ಎಂದ ದೂರನ್ನು ಕೊಟ್ಟಿದ್ದಾರೆ. ರಾಜ್ಯ ಬಿಜೆಪಿ ಘಟಕ ಖೂಬ ಅವರಿಗೆ ನೋಟಿಸ್‌ ನೀಡಬೇಕಿತ್ತು, ಸ್ಪಷ್ಟನೆ ಕೇಳಬೇಕಿತ್ತು ಅಥವಾ ಕೇಂದ್ರ ಸಂಪುಟದಿಂದ ತೆಗೆದು ಹಾಕಬೇಕಿತ್ತು, ಇದನ್ನೆಲ್ಲಾ ಮಾಡದೇ ಕ್ರಿಮಿನಲ್‌ಗಳನ್ನ ರಕ್ಷಿಸುವ ಕೆಲಸ ಮಾಡುತ್ತಿದೆ’ ಎಂದು ರಮೇಶ್‌ ಬಾಬು ಕಿಡಿಕಾರಿದರು.

‘ರಾಷ್ಟ್ರೀಯ ಬಿಜೆಪಿ ನಾಯಕರು ಸುಮ್ಮನೆ ಕುಳಿತಿದ್ದಾರೆ. ಕಾಂಗ್ರೆಸ್‌ ಪಕ್ಷವು ವಿಧಾನಸಭಾ ಸ್ಪೀಕರ್‌ ಅವರಲ್ಲಿ ಮನವಿ ಮಾಡುತ್ತಿದ್ದು, ಶಾಸಕರಾದ ಪ್ರಭು ಚೌವ್ಹಾಣ್‌ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಮತ್ತು ನ್ಯಾಯಾಂಗ ತನಿಖೆಗೆ ಸೂಚಿಸಬೇಕು. ಭಗವಂತ ಖೂಬಾ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬೀದರ್‌ ಜನತೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

ಎನ್‌ಇಪಿ: ನಮ್ಮ ಮಾತಿಗೆ ನಾವು ಬದ್ಧ: ಹೊಸ ಶಿಕ್ಷಣ ನೀತಿಯನ್ನು (ಎನ್‌ಇಪಿ) ರಾಜ್ಯದಲ್ಲಿ ರದ್ದುಮಾಡಲಾಗುವುದು ಎಂದು ನಮ್ಮ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಅದರಂತೆ ನಾವು ನಮ್ಮ ಮಾತಿಗೆ ಬದ್ಧರಾಗಿದ್ದೇವೆ. ಯಾವುದೇ ಕಾರಣಕ್ಕೂ ಶಿಕ್ಷಣವನ್ನು ರಾಜ್ಯ ಪಟ್ಟಿಯಿಂದ ತಗೆದು ಕೇಂದ್ರ ಪಟ್ಟಿಗೆ ಸೇರಿಸಬಾರದು. ಶಿಕ್ಷಣದ ಕುರಿತು ಕಾನೂನು ತೆಗೆದುಕೊಳ್ಳುವ ಹಕ್ಕು ರಾಜ್ಯಗಳ ಬಳಿಯೇ ಇರಬೇಕು. ಶಿಕ್ಷಣವನ್ನು ತಿರುಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನೂತನ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ತೀರ್ಮಾನ ತೆಗೆದುಕೊಳ್ಳುವ ಹಕ್ಕನ್ನು ರಾಜ್ಯಗಳಿಗೆ ನೀಡಲಾಗುವುದು ಎಂದು ನಿರ್ಮಲಾ ಸೀತರಾಮನ್‌ ಅವರು ಹೇಳಿದ್ದರು, ಅದನ್ನು ನಾವು ಸ್ವಾಗತಿಸುತ್ತೇವೆ. ಶೇ.30 ರಷ್ಟು ಶಿಕ್ಷಕರ ವರ್ಗಾವಣೆಯನ್ನು ಅತ್ಯಂತ ಸುಲಲಿತವಾಗಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ನಡೆದಿದೆ. ಜೊತೆಗೆ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು