Ad

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಹೈಕೋರ್ಟ್‌ನಿಂದಲೇ ಅನುಮತಿ!

ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ ನೇರವಾಗಿ ಹೈಕೋರ್ಟ್‌ನಿಂದ ಅನುಮತಿ ಪಡೆಯಲಾಗಿದೆ. ಸರ್ಕಾರದಿಂದ ಅನುಮತಿ ದೊರೆಯುವುದು ವಿಳಂಬವಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಹೋಗಿದ್ದ ಬಿಜೆಪಿ ಮುಖಂಡರು, ಪಾದಯಾತ್ರೆಗೆ ಅನುಮತಿ ಪಡೆದುಕೊಂಡಿದ್ದಾರೆ.

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ ನೇರವಾಗಿ ಹೈಕೋರ್ಟ್‌ನಿಂದ ಅನುಮತಿ ಪಡೆಯಲಾಗಿದೆ. ಸರ್ಕಾರದಿಂದ ಅನುಮತಿ ದೊರೆಯುವುದು ವಿಳಂಬವಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಹೋಗಿದ್ದ ಬಿಜೆಪಿ ಮುಖಂಡರು, ಪಾದಯಾತ್ರೆಗೆ ಅನುಮತಿ ಪಡೆದುಕೊಂಡಿದ್ದಾರೆ.

ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ ಇಲ್ಲ ಎಂದು ಮೊನ್ನೆ ಗೃಹ ಸಚಿವ ಪರಮೇಶ್ವರ ಹೇಳಿದ ಬೆನ್ನಲ್ಲೇ ಸರ್ಕಾರದಿಂದ ಸಮಸ್ಯೆ ಆಗದಂತೆ ಬಿಜೆಪಿ ಮುನ್ನೆಚ್ಚರಿಕೆ ವಹಿಸಿ ಉಚ್ಚ ನ್ಯಾಯಾಲಯಕ್ಕೆ ತೆರಳಿತ್ತು.

ಶಾಸಕ ಪಿ. ರಾಜೀವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದನ್ ಗೌಡರ್, ಅನುಮತಿ ನೀಡಿದ್ದು, ಪಾದಯಾತ್ರೆ ಸಾಗುವ ಜಾಗದಲ್ಲಿ ಭದ್ರತೆ ನೀಡುವಂತೆ ಡಿಸಿ, ಎಸ್ಪಿಗೆ ಸೂಚನೆ ನೀಡಿದ್ದಾರೆ.

Ad
Ad
Nk Channel Final 21 09 2023