News Karnataka Kannada
Saturday, April 20 2024
Cricket
ಬೆಂಗಳೂರು

ಕೇರಳದಲ್ಲಿ ಆನೆ ದಾಳಿಗೆ ಕರ್ನಾಟಕದಿಂದ ಪರಿಹಾರ ಯಾಕೆ: ಬಿಜೆಪಿಯಿಂದ ಹೊಸ ಅಸ್ತ್ರ!

Bjp
Photo Credit : News Kannada

ಬೆಂಗಳೂರು: ಕೇರಳದ ವಯನಾಡಿನಲ್ಲಿ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿದ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಮೃತ ವ್ಯಕ್ತಿ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸೂಚನೆ ಮೇರೆಗೆ ಕರ್ನಾಟಕದ ಸರ್ಕಾರದಿಂದ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಕೇರಳಲ್ಲಿ ಆನೆ ದಾಳಿಗೆ ಕರ್ನಾಟಕದಿಂದ ಪರಿಹಾರ ಯಾಕೆ ಎಂದು ಪ್ರಶ್ನಿಸಲಾಗಿದೆ.

ಕಳೆದ ಫೆಬ್ರವರಿ 10ರಂದು ಕೇರಳದಲ್ಲಿ ಮನೆಗೆ ನುಗಿದ ಆನೆ 47 ವರ್ಷದ ವ್ಯಕ್ತಿಯನ್ನು ತುಳಿದು ಹೋಗಿತ್ತು. ಭಾರತ್ ಜೋಡೋ ನ್ಯಾಯ ಯಾತ್ರೆಯ ಹಿನ್ನೆಲೆಯ ಉತ್ತರಪ್ರದೇಶದಲ್ಲಿದ್ದ ರಾಹುಲ್ ಗಾಂಧಿ ಅವರು ವಯನಾಡಿಗೆ ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು.

ರಾಹುಲ್ ಗಾಂಧಿ ಅವರ ಭೇಟಿ ನೀಡಿದ ಬಳಿಕ ಕರ್ನಾಟಕ ಸರ್ಕಾರ ಮೃತ ಕುಟುಂಬಸ್ಥರಿಗೆ 15 ಲಕ್ಷ ರೂಪಾಯಿ ಘೋಷಣೆ ಮಾಡಿದೆ ಎನ್ನಲಾಗಿದೆ. ಹೀಗಾಗಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಸಿ.ಟಿ ರವಿ ಅವರು ರಾಹುಲ್ ಗಾಂಧಿ ಮೆಚ್ಚಿಸೋದಕ್ಕೆ ಸರ್ಕಾರ ರಾಜ್ಯದ ಜನರ ಹಣ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು