Ad

ವಾಲ್ಮೀಕಿ ನಿಗಮ, ಮುಡಾ ಅಕ್ರಮ ಕೇಸ್: ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರು ವಶಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಅವ್ಯವಹಾರ ಖಂಡಿಸಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಅವ್ಯವಹಾರ ಖಂಡಿಸಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.

Ad
300x250 2

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಕಾಲ್ನಡಿಗೆ ಮೂಲಕ ಕುಮಾರಕೃಪಾ ವಸತಿ ಗೃಹದಿಂದ ಹೊರಟು ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಲಾಗಿತ್ತು.

ಅದರಂತೆ, ಶಾಸಕರು, ಮೇಲ್ಮನೆ ಸದಸ್ಯರು, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದ್ದರು. ವಿಜಯೇಂದ್ರ, ಆರ್.ಅಶೋಕ್ ಅವರ ನೇತೃತ್ವದಲ್ಲಿ ಶಾಸಕರು ಹೊರಬರುತ್ತಿದ್ದಂತೆ ತಡೆದ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದಿದ್ದರು. ಬಳಿಕ ಬಿಡುಗಡೆ ಮಾಡಿದ್ದಾರೆ.

ಈ ವೇಳೆ ಬಿಜೆಪಿ ಮುಖಂಡರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಶಾಸಕರು `ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’ ಕೂಗಿದರು. ಇದೇ ವೇಳೆ ಆರ್.ಅಶೋಕ್ ಅವರು, `ಈ ಸರ್ಕಾರದ ದೌರ್ಜನ್ಯವನ್ನು ಖಂಡಿಸುತ್ತೇನೆ. ಪ್ರತಿಭಟನೆಗೆ ಅವಕಾಶ ಕೊಡುತ್ತಿಲ್ಲ’ ಎಂದು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು.

Ad
Ad
Nk Channel Final 21 09 2023
Ad