Bengaluru 23°C
Ad

ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ !

Muniratna (1)

ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಜಾತಿನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು.

ಜಾತಿನಿಂದನೆ, ಕೊಲೆ ಬೆದರಿಕೆ ಪ್ರಕರಣದಲ್ಲಿ ಅರೆಸ್ಟ್ ಆದ ಶಾಸಕ ಮುನಿರತ್ನ ಅವರ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಕೋರ್ಟ್‌ ಮುಂದೆ ಆರೋಪಿಯನ್ನು ಹಾಜರು ಪಡಿಸಿದ ಪೊಲೀಸರು ರಿಮ್ಯಾಂಡ್ ಅರ್ಜಿಯಲ್ಲಿ ಕಸ್ಟಡಿಗೆ ಕೇಳಲಿಲ್ಲ. ಮುನಿರತ್ನ ಪರ ವಾದಿಸಲು ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಆಗಮಿಸಿದ್ದರು. ಆರೋಪಿಗೆ ನೊಟೀಸ್ ನೀಡುವ ಸಮಯದಲ್ಲಿ ಬಂಧನ ಮಾಡಲಾಗಿದೆ. ಹೀಗಾಗಿ ಮಧ್ಯಂತರ ಜಾಮೀನು ನೀಡಬಹುದು ಎಂದು ಮುನಿರತ್ನ ಪರ ವಕೀಲರು ನ್ಯಾಯಾಧೀಶರಿಗೆ ಮನವಿ ಮಾಡಿದರು.

ಕೋರ್ಟ್‌ನಲ್ಲಿ ಸರ್ಕಾರಿ ಪರ ವಕೀಲರು ಮುನಿರತ್ನ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೇಳಿದರು. ಆಕ್ಷೇಪಣೆ ಸಲ್ಲಿಸಲು ನಾಳೆಗೆ ಕಾಲಾವಕಾಶ ನೀಡಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ. ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಾಳೆಗೆ ಶಾಸಕರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಆಗಿರುವ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಸದ್ಯ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

Ad
Ad
Nk Channel Final 21 09 2023