ಬೆಂಗಳೂರು: ಕೇಂದ್ರದ ಸ್ಥಾಯಿ ಸಮಿತಿಯನ್ನು ರಚನೆ ಮಾಡಲಾಗಿದ್ದು, ಇಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಸಂಸತ್ನ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ನೇಮಕ ಮಾಡಲಾಗಿದೆ. ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡುವ ಮೂಲಕ ಡಾ.ಕೆ.ಸುಧಾಕರ್ಗೆ ಅಭಿನಂದನೆ ತಿಳಿಸಿದೆ.
ಬಿಜೆಪಿಯ ಭರ್ತೃಹರಿ ಮಹತಾಬ್ ಅವರಿಗೆ ಹಣಕಾಸು ಸ್ಥಾಯಿ ಸಮಿತಿಯ ಮುಖ್ಯಸ್ಥ ಸ್ಥಾನ ನೀಡಲಾಗಿದ್ದು, ಶಶಿ ತರೂರ್ ಅವರಿಗೆ ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ಮತ್ತು ಸಂತಸದ ವಿಷಯವಾಗಿದೆ ಎಂದು ಹೇಳಿದ್ದಾರೆ.
Ad