ಉಚಿತ ವಿದ್ಯುತ್‌ ಯೋಜನೆ ದುರುಪಯೋಗಕ್ಕೆ ಜನರನ್ನು ಪ್ರಚೋದಿಸುತ್ತಿರುವ ಬಿಜೆಪಿ: ಸಿಎಂ ಆರೋಪ

ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗಿನ ಉಚಿತ ವಿದ್ಯುತ್‌ ನೀಡುವ ಯೋಜನೆಯನ್ನು ದುರುಪಯೋಗ ಮಾಡುವಂತೆ ಬಿಜೆಪಿ ಜನರನ್ನು ಪ್ರಚೋದಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಪಿಸಿದ್ದಾರೆ.
ಸಂಯಮವಿಲ್ಲದೆ ವಿದ್ಯುತ್ ಬಳಸುವಂತೆ ಬಿಜೆಪಿ ಹೇಳುತ್ತಿದೆ. ಆದರೆ ನಾವು ಯೋಜನೆ ದುರುಪಯೋಗವಾಗದಂತೆ ನೋಡಿಕೊಳ್ಳುತ್ತೇವೆ ಮತ್ತು ಜನರ ಅಜಾಗರೂಕ ವಿದ್ಯುತ್ ಬಳಕೆಗೆ ಬ್ರೇಕ್ ಹಾಕುತ್ತೇವೆ ಎಂದು ಅವರು ಹೇಳಿದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

”ನಮ್ಮ ಸರಕಾರ ಬಡವರು ಮತ್ತು ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಉಚಿತ ವಿದ್ಯುತ್ ಸರಬರಾಜು ಯೋಜನೆಯನ್ನು ಘೋಷಿಸಿದೆ, ಜನರು ತಮ್ಮ ಹಿಂದಿನ ವರ್ಷದ ವಿದ್ಯುತ್ ಬಳಕೆಗೆ ಶೇಕಡಾ 10 ರಷ್ಟು ಹೆಚ್ಚುವರಿಯಾಗಿ ಬಳಸಲು ನಾವು ಅವಕಾಶ ನೀಡಿದ್ದೇವೆ. ಜನರು ಈ ಯೋಜನೆಯನ್ನು ಸಂಭ್ರಮದಿಂದ ಸ್ವೀಕರಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಆದರೆ, ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ ಪಕ್ಷವು ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳಲು ಮತ್ತು ವಿವೇಚನಾರಹಿತವಾಗಿ ವಿದ್ಯುತ್ ಬಳಕೆಗೆ ಉತ್ತೇಜನ ನೀಡುತ್ತಿದೆ. ಇದು ಜನವಿರೋಧಿಯಾಗಿದೆ. ರಾಜ್ಯದ ಪ್ರಜ್ಞಾವಂತರು ಈ ವಿಷಯದಲ್ಲಿ ಅವರನ್ನು ಪ್ರೋತ್ಸಾಹಿಸುವುದಿಲ್ಲ ಎಂಬ ವಿಶ್ವಾಸ ನಮಗಿದೆ. ಸಿದ್ದರಾಮಯ್ಯ ತಿಳಿಸಿದ್ದಾರೆ.

Umesha HS

Recent Posts

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

13 mins ago

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

28 mins ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

46 mins ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

1 hour ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

1 hour ago

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

2 hours ago