ಬಿಜೆಪಿ ಏಳನೇ ಪಟ್ಟಿ ಪ್ರಕಟ: ಗೋವಿಂದ್ ಕಾರಜೋಳ ಅವರಿಗೆ ಚಿತ್ರದುರ್ಗದ ಟಿಕೆಟ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಏಳನೇ ಪಟ್ಟಿ ಪ್ರಕಟವಾಗಿದ್ದು, ಚಿತ್ರದುರ್ಗ ಲೋಕಸಭಾ ಚುನಾವಣೆಯ ಹಾಲಿ ಸಂಸದ, ಕೇಂದ್ರ ಸಚಿವರಾಗಿದ್ದ ನಾರಾಯಣಸ್ವಾಮಿ ಅವರಿಗೆ ಕೊಕ್ ನೀಡಲಾಗಿದ್ದು, ಬಿಎಸ್ ಯಡಿಯೂರಪ್ಪನವರ ಆಪ್ತ, ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರಿಗೆ ಬಿಜೆಪಿ ಹೈಕಮಾಂಡ್​ ಮಣೆ ಹಾಕಿದೆ.

ಇದರೊಂದಿಗೆ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

ಅಲ್ಲದೇ ಬೇರೆ ಜಿಲ್ಲೆಯವರಿಗೆ ಚಿತ್ರದುರ್ಗದ ಟಿಕೆಟ್ ಕೊಡಬಾರದು ಎಂದು ವಿರೋಧ ಕೇಳಿ ಬಂದಿತ್ತು. ಆದರೂ ಬಿಜೆಪಿ ಹೈಕಮಾಂಡ್ ಕಾರಜೋಳಗೆ ಟಿಕೆಟ್ ಘೋಷಣೆ ಮಾಡಿದೆ.

ಈ ಮೂಲಕ ಬಿಜೆಪಿ ಹೈಕಮಾಂಡ್​ ರಾಜ್ಯದಲ್ಲಿ ಸ್ಪರ್ಧಿಸುವ ಎಲ್ಲ 25 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಉಳಿದ 3 ಸ್ಥಾನಗಳನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

34 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

57 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago