ಸಂಸದೆ ಸುಮಲತಾರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  ಅವರು ಮಂಡ್ಯದ ಸಂಸದೆ ಸುಮಲತಾರನ್ನು ಇಂದು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಈ ಬಾರಿ ಬಿಜೆಪಿಯಿಂದ ಸುಮಲತಾ ಅವರಿಗೆ ಮಂಡ್ಯ ಟಿಕೆಟ್  ಸಿಗಲಿದೆ ಎಂದು ಹೇಳಲಾಗಿತ್ತು. ಸುಮಲತಾ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದರೆ, ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ಸಿಗಲಿಲ್ಲ.

ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಆಗುತ್ತಿದ್ದಂತೆಯೇ ತಟಸ್ಥ ನಿಲುವನ್ನು ಸುಮಲತಾ ತಾಳಿದ್ದರು.

ತಮ್ಮ ಬೆಂಬಲಿಗರ ಸಭೆ ಕರೆದು, ತೀರ್ಮಾನ ತಗೆದುಕೊಳ್ಳೋದಾಗಿ ತಿಳಿಸಿದ್ದರು. ನಾಳೆ ಅವರು ಬೆಂಬಲಿಗರ ಸಭೆ ಕರೆದಿದ್ದಾರೆ.

ಅದಕ್ಕೂ ಮುನ್ನ ವಿಜಯೇಂದ್ರ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ.

Ashika S

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

14 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

16 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

20 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

30 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

35 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

51 mins ago