ಬಿಜೆಪಿ ಮೂರನೆ ಪಟ್ಟಿ ಬಿಡುಗಡೆ: ರಾಮ್‌ದಾಸ್‌ಗಿಲ್ಲ ಟಿಕೆಟ್‌

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಎ. ರಾಮ್‌ದಾಸ್‌ ಅವರಿಗೆ ಟಿಕೆಟ್‌ ದೊರೆತಿಲ್ಲ. ಬದಲಿಗೆ ಶ್ರೀ ವತ್ಸ ಅವರಿಗೆ ಟಿಕೆಟ್‌ ನೀಡಲಾಗಿದೆ.

ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣಗೆ ಕೂಡ ಟಿಕೆಟ್ ನಿರಾಕರಿಸಲಾಗಿದೆ. ಅವರು ಗೋವಿಂದರಾಜನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಹದೇವಪುರ ಕ್ಷೇತ್ರದ ಟಿಕೆಟ್ ಅರವಿಂದ ಲಿಂಬಾವಳಿ ಕೈತಪ್ಪಿದ್ದು, ಅವರ ಪತ್ನಿ ಮಂಜುಳಾಗೆ ದೊರೆತಿದೆ.

ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಜತೆಗೆ ಮಾನ್ವಿ ಕ್ಷೇತ್ರದ ಟಿಕೆಟ್​ ಅನ್ನೂ ಬಾಕಿ ಇರಿಸಿಕೊಂಡಿದೆ. ಶಿವಮೊಗ್ಗ ನಗರ ಕ್ಷೇತ್ರವನ್ನು ಈವರೆಗೆ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಪ್ರತಿನಿಧಿಸುತ್ತಿದ್ದರು. ಇತ್ತೀಚೆಗಷ್ಟೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ, ತಮ್ಮ ಮಗ ಕಾಂತೇಶ್​ಗೆ ಟಿಕೆಟ್ ನೀಡಬೇಕೆಂಬ ಬೇಡಿಕೆಯನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಬಿಜೆಪಿ ಮೂರನೆ ಪಟ್ಟಿಯಲ್ಲಿ ಟಿಕೆಟ್‌ ಗಿಟ್ಟಿಸಿಕೊಂಡವರ ವಿವರ ಹೀಗಿದೆ
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ – ಉಮೇಶ್ ಶೆಟ್ಟಿ
ಬೆಂಗಳೂರಿನ ಹೆಬ್ಬಾಳ ಕ್ಷೇತ್ರ – ಕಟ್ಟಾ ಜಗದೀಶ್​
ಮೈಸೂರಿನ ಕೃಷ್ಣರಾಜ ಕ್ಷೇತ್ರ – ಶ್ರೀವತ್ಸ
ಹಗರಿಬೊಮ್ಮನಹಳ್ಳಿ ಕ್ಷೇತ್ರ – ಬಿ.ರಾಮಣ್ಣ
ನಾಗಠಾಣ ಕ್ಷೇತ್ರ – ಸಂಜಯ್ ಐಹೊಳೆ
ಸೇಡಂ ಕ್ಷೇತ್ರ – ರಾಜಕುಮಾರ ಪಾಟೀಲ್ಕೊ
ಕೊಪ್ಪಳ ಕ್ಷೇತ್ರ – ಮಂಜುಳಾ ಅಮರೇಶ್
ರೋಣ ಕ್ಷೇತ್ರ – ಕಳಕಪ್ಪ ಬಂಡಿ
ಮಹದೇವಪುರ – ಮಂಜುಳಾ ಲಿಂಬಾವಳಿ

Umesha HS

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago