ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್ಗೂ ಸಂಬಂಧವಿದೆ ಎಂಬ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ನೈತಿಕ ಹೊಣೆಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಿ ಬಿಜೆಪಿ ಮುಂದಾಗಿದೆ.
ರಾಜ್ಯದಲ್ಲಿ ಬರಕ್ಕೆ ತುತ್ತಾಗಿರುವ ರೈತರಿಗೆ ಇನ್ನೂ ಪರಿಹಾರ ನೀಡಿಲ್ಲ. ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ವಿಪರೀತವಾಗಿದೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ.
ರಾಜ್ಯದ ಕಾನೂನು ಮತ್ತು ಸುವ್ಯವಸ್ಥತೆ ಸಂಪೂರ್ಣ ಕುಸಿದಿದೆ. ಈ ಎಲ್ಲ ಕಾರಣದಿಂದಾಗಿ ಸೋಮವಾರದಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೆಲವು ಕಡೆ ಸೋಮವಾರದಂದು ಪ್ರತಿಭಟನೆ ಮಾಡಲು ಸಾಧ್ಯವಾಗಿದ್ದರೆ ಮಂಗಳವಾರದಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿದ್ದಾರೆ.