News Karnataka Kannada
Saturday, May 04 2024
ಬೆಂಗಳೂರು

ಜೈನಮುನಿ ಹತ್ಯೆ ಖಂಡಿಸಿ ರಾಜಭವನಕ್ಕೆ ಇಂದು ಬಿಜೆಪಿ ನಾಯಕರ ಮೆರವಣಿಗೆ

bjp to protest
Photo Credit : By Author

ಬೆಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾ| ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರ ಹತ್ಯೆ ಮಾಡಲಾಗಿದ್ದರೆ, ಮತ್ತೊಂದೆಡೆ ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ನಡೆದ ಹನುಮ ಜಯಂತಿಯ ಸಂದರ್ಭದಲ್ಲಿ ಆದ ಕ್ಷುಲ್ಲಕ ವಿಚಾರದ ಗಲಾಟೆಯಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್​ ಕೊಲೆ ನಡೆದಿದೆ.

ಇಡೀ ರಾಜ್ಯವನ್ನು ಈ ಎರಡು ಘಟನೆಗಳು ಬೆಚ್ಚಿಬೀಳಿಸಿದ್ದು ಎಂದಿನಂತೆ ಸರ್ಕಾರ ಮತ್ತು ವಿಪಕ್ಷಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಹೀಗಾಗಿ ಈ ಎರಡೂ ಕೊಲೆಗಳನ್ನು ಖಂಡಿಸಿ ಇಂದು ವಿಪಕ್ಷ ಬಿಜೆಪಿ ಸದಸ್ಯರು ತೀವ್ರ ಪ್ರತಿಭಟನೆಗೆ ಮುಂದಾಗಿದ್ದಾರೆ. ಎರಡೂ ಹತ್ಯೆಗಳನ್ನು ಖಂಡಿಸಿ ಮತ್ತು ಜೈನ ಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಒತ್ತಾಯಿಸಿ ಬಿಜೆಪಿ ನಾಯಕರು ಇಂದು ಬೆಳಗ್ಗೆ 11 ಗಂಟೆಗೆ ರಾಜಭವನಕ್ಕೆ ಮೆರವಣಿಗೆ ಸಾಗಲಿದ್ದಾರೆ.

ಈ ಎರಡು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸತ್ಯಾಸತ್ಯತೆ ಪರಿಶೀಲನೆಗೆ ಎರಡು ತಂಡ ರಚನೆ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು