ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಿ.ವೈ ವಿಜಯೇಂದ್ರ ಅವರು ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಇವರನ್ನು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ವಾಗತಿಸಿದರು. ಹೆಚ್ಡಿಡಿ ಆಶೀರ್ವಾದ ಪಡೆದ ಬಳಿಕ ಬಿ.ವೈ ವಿಜಯೇಂದ್ರ ಅವರು ಕೆಲ ಹೊತ್ತು ಚರ್ಚೆ ನಡೆಸಿದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಜೆಡಿಎಸ್ ಮೈತ್ರಿಯೊಂದಿಗೆ ಚುನಾವಣೆಯನ್ನು ಎದುರಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.