ಬೆಂಗಳೂರು: ನನ್ನ ತಂದೆ ಆರೋಗ್ಯವಾಗಿದ್ದಾರೆ.  ಕಳೆದ 15 ದಿನಗಳಿಂದ ನಿರಂತರ ಓಡಾಟ ಇತ್ತು. ಕೆಲಸದ ಒತ್ತಡದಿಂದ ಮೂಗಿನಲ್ಲಿ ರಕ್ತಸ್ರಾವ ಆಗಿದೆ ಎಂದು ಕೇಂದ್ರ ಸಚಿವ ಹೆಚ್‌ಡಿಕೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಬಿಜೆಪಿ-ಜೆಡಿಎಸ್‌ ನಾಯಕರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ದಿಢೀರನೆ ಮೂಗಿನಿಂದ ರಕ್ತಸ್ರಾವ ಉಂಟಾಗಿತ್ತು. ಈ ಕುರಿತು ಮಾಧ್ಯಮಗಳೊಂದಿಗೆ ನಿಖಿಲ್‌ ಮಾತನಾಡಿದ್ದಾರೆ.

ಬಿಜೆಪಿ-ಜೆಡಿಎಸ್‌ ನಾಯಕರೊಟ್ಟಿಗಿನ ಸಭೆಯ ಬಳಿಕ ಸುದ್ದಿಗೋಷ್ಠಿ ವೇಳೆ ತಂದೆಗೆ ಮೂಗಿನಿಂದ ರಕ್ತ ಬಂದಿದೆ. ಜನ ಆತಂಕಪಡೋದು ಬೇಡ. ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಕೆಲಸದ ಒತ್ತಡಗಳು ಇದ್ದವು.

ಕಳೆದ 15 ದಿನಗಳಿಂದ ನಿರಂತರ ಓಡಾಟ ಇತ್ತು. ಬೆಳಗ್ಗೆ 4.30ಕ್ಕೆ ಎದ್ದೇಳುತ್ತಿದ್ದರು, ಮಲಗೋದು ರಾತ್ರಿ 1 ಗಂಟೆ ಆಗುತ್ತಿತ್ತು. ಡಾಕ್ಟರ್ ಕೂಡ ಆತಂಕ ಬೇಡ ಅಂತ ಹೇಳಿದ್ದಾರೆ. ಯಾವ ರೀತಿ ಚಿಕಿತ್ಸೆ ಕೊಡಬೇಕು ಅಂತ ಪರೀಕ್ಷೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.