ಬೆಂಗಳೂರು : ನಗರದ 40 ಖಾಸಗಿ ಶಾಲೆಗಳಿಗೆ ಶುಕ್ರವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿಗಳು ತಪಾಸಣೆ ನಡೆಸಿದ್ದಾರೆ.

ನಗರದ ಆರ್​​.ಆರ್.​ನಗರ, ಕೆಂಗೇರಿ ಸೇರಿದಂತೆ ಹಲವು ಪ್ರದೇಶಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. [email protected] ಎಂಬ ಇ-ಮೇಲ್​ನಿಂದ ಈ ಸಂದೇಶ ಬಂದಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.