ಬೆಂಗಳೂರು : ಇದೀಗ ಮತ್ತೆ ಬಾಂಬ್ ಬೆದರಿಕೆ ಸರಣಿ ಶುರುವಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಟೇಲ್ ಇದಾಗಿದ್ದು, ತಕ್ಷಣ ಪೊಲೀಸರು ಎಚ್ಚೆತ್ತು ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಗರದ ತಾಜ್ ವೆಸ್ಟೆಂಡ್ ಹೋಟೆಲ್ ಗೆ ಇ ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಇದು ನಗರದ ಲಕ್ಷುರಿ ಹೊಟೇಲ್ ಗಳಲ್ಲಿ ಒಂದಾಗಿದ್ದು, ರಾಜಕಾರಣಿಗಳು, ಕ್ರಿಕೆಟರ್ ಗಳು, ಸಿನೆಮಾ ತಾರೆಯರು ಆಗಾಗ ವಾಸ್ತವ್ಯ ಹೂಡುವ ಪ್ರತಿಷ್ಠಿತ ಹೋಟೆಲ್ ಆಗಿದೆ. ಮಾಹಿತಿ ಬಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Ad