News Karnataka Kannada
Saturday, May 04 2024
ಬೆಂಗಳೂರು

ಜೆಡಿಎಸ್​ ಜತೆ ಮೈತ್ರಿ ಖಚಿತಪಡಿಸಿದ ಬೊಮ್ಮಾಯಿ: ಗ್ರೀನ್ ಸಿಗ್ನಲ್ ಕೊಟ್ಟ ಶಾ ಎಂದ ಬಿಎಸ್ ವೈ

Bommai confirms alliance with JD(S), BSY accuses Shah of giving green signal
Photo Credit : News Kannada

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಅಂತೆ ಕಂತೆಗಳಿಗೆ ಕೊನೆಗೂ ತೆರೆ ಬಿದ್ದಿದೆ. ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸುವುದು ಖಚಿತವಾಗಿದೆ. ಈ ಬಗ್ಗೆ ಸ್ವತಃ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ರವಾನಿಸಿದ್ದು, ಜೆಡಿಎಸ್​ ಜೊತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಈ ಮೈತ್ರಿ ಮಾತುಕತೆ ಬಹಳ ಅವಶ್ಯಕ, ಮಹತ್ವದ್ದಾಗಿದೆ. ಈ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಂದಾಗುವುದು ಮುಖ್ಯವಾಗಿತ್ತು. ಹೀಗಾಗಿ ನಾವು ಒಗ್ಗಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಮೈತ್ರಿ ಸ್ಥಾನಗಳ ಹಂಚಿಕೆ ಬಗ್ಗೆ ಮುಂದೆ ತೀರ್ಮಾನ ಆಗಲಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು