News Karnataka Kannada
Sunday, April 28 2024
ಬೆಂಗಳೂರು

ಕೃಷಿ ಸಚಿವರ ವಿರುದ್ಧ ಲಂಚದ ಆರೋಪ: ರಾಜ್ಯಪಾಲರಿಗೆ ನೀಡಿದ ಪತ್ರದಲ್ಲೇನಿದೆ?

Bribery allegations against agriculture minister: What's in the letter given to governor
Photo Credit : News Kannada

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಕೃಷಿ ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ. ದೂರುದಾರರು ಯಾರು ಎಂಬ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗಿದೆ.

ಮಂಡ್ಯ, ಮಳ್ಳವಳ್ಳಿ, ಕೆ.ಆರ್. ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವರ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರಿನ ಜೊತೆಗಿನ ಪತ್ರದಲ್ಲಿ ಹೇಳಿದ್ದಾರೆ.

ಸಚಿವರ ವಿರುದ್ಧದ ದೂರಿನ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ಪರಿಶೀಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಮಧ್ಯೆ ದೂರಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಚಲುವರಾಯಸ್ವಾಮಿ, ಇಲಾಖೆ ಕಾರ್ಯದರ್ಶಿಯಿಂದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು