News Karnataka Kannada
Friday, May 03 2024
ಬೆಂಗಳೂರು

ಲಂಚ ಪ್ರಕರಣ: ಲೋಕಾಯುಕ್ತ ಪೊಲೀಸರ ಮೇಲೆ ವಾಹನ ಹತ್ತಿಸಲು ಯತ್ನಿಸಿದ ಸರ್ಕಾರಿ ಅಧಿಕಾರಿ

Bribery case: Govt official tries to drive over Lokayukta cops
Photo Credit : News Kannada

ಬೆಂಗಳೂರು: ಆಹಾರ ನಿರೀಕ್ಷಕರೊಬ್ಬರು ಟ್ರೇಡ್‌ ಲೈಸೆನ್ಸ್‌ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ವಾಹನ ಹತ್ತಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ.

ಬೆಂಗಳೂರು ನಗರದ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ನಿರೀಕ್ಷಕ ಮಹಾಂತೇಗೌಡ ಬಿ ಕಡಬಾಳು ಎನ್ನುವವರು, ರಂಗದಾಮಯ್ಯ ಎಂಬುವರ ಬಳಿ ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಮುಂಗಡ ಹಣ 43ಸಾವಿರ ನಗದನ್ನ ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ತನ್ನ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆಂದ ಕೂಡಲೇ ತಮ್ಮ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ.

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಆರೋಪಿ ಫುಡ್ ಇನ್ಸ್ಪೆಕ್ಟರ್​ ಕಾರು ಹತ್ತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಸುಮಾರು 15 ಕಿ.ಮೀ ವರೆಗೆ ಹಿಂಬಾಲಿಸಿ ನೆಲಮಂಗಲದ ಸೊಂಡೆಕೊಪ್ಪ ರಸ್ತೆ ಬಳಿ ಲೋಕಾಯುಕ್ತ ಅಧಿಕಾರಿಗಳು ಸುತ್ತುವರೆದಿದ್ದಾರೆ. ಅದಾಗ್ಯೂ. ಅಧಿಕಾರಿಗಳ ಮೇಲೆ ವಾಹನವನ್ನು ಚಲಾಯಿಸಲು ಪ್ರಯತ್ನಿಸಿದ್ದರು. ಕೊನೆಗೆ ಮತ್ತೊಂದು ಕಾರನ್ನು ಬಳಸಿ ಅವರನ್ನು ಹಿಡಿದ ಘಟನೆ ನಡೆದಿದೆ.

ಇನ್ನು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದರು, ಜೊತೆಗೆ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನಲೆ, ಹಲ್ಲೆ ಮತ್ತು ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ತಡೆದ ಆರೋಪದ ಮೇಲೆ ಅಧಿಕಾರಿಯ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು