Bengaluru 25°C
Ad

ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ಕೋರ್ಟ್​ಗೆ ಆರೋಪ ಪಟ್ಟಿ ಸಲ್ಲಿಕೆ

Bsy

ಬೆಂಗಳೂರು: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಬಿಎಸ್​ವೈ ಬಂಧನ ಭೀತಿಯಲ್ಲಿದ್ದ ಪಾರಾಗಿದ್ದಾರೆ. ಇದೀಗ ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿಯನ್ನು (ಚಾರ್ಜ್​ಶೀಟ್) ನ್ಯಾಯಾಲಕ್ಕೆ ಸಲ್ಲಿಸಲಾಗಿದೆ. ಇಂದು(ಜೂನ್ 27) ಪೊಲೀಸರು, ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದರು.

ಬಾಲಕಿ ದಾಖಲಿಸಿದ್ದ ಹಳೇ ಕೇಸ್ ಬಗ್ಗೆ ವಿಚಾರಿಸುತ್ತಾ ರೂಮಿಗೆ ಕರೆದೊಯ್ದು ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಆರೋಪಪಟ್ಟಿಯಲ್ಲಿ ಉಲ್ಲೇಖವಾಗಿದೆ. ಬಾಲಕಿ ಪ್ರತಿಭಟಿಸಿದಾಗ ಹಣ ನೀಡಿ ಕಳುಹಿಸಿರುವುದಾಗಿ ಆರೋಪಿಸಲಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾಗಿದೆ.

ನಂತರ ಬಾಲಕಿಯ ತಾಯಿ ಇದನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಪೋಸ್ಟ್ ಆಗಿದ್ದ ವಿಡಿಯೋ ಡಿಲೀಟ್​ ಮಾಡಿಸಲು ಮೂವರು ಪ್ರಯತ್ನಿಸಿದ್ದಾರೆ. ವೈ.ಎಂ. ಅರುಣ್, ಎಂ.ರುದ್ರೇಶ್, ಜಿ.ಮರಿಸ್ವಾಮಿ ಎನ್ನುವರು ಮಹಿಳೆಯನ್ನು ಕರೆತಂದು ವಿಡಿಯೋ ಪೋಸ್ಟ್ ಡಿಲೀಟ್ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ನಾಲ್ವರ ವಿರುದ್ದವೂ ದ ಪೊಲೀಸರು, ಆರೋಪಪಟ್ಟಿ ದಾಖಲಿಸಿದ್ದಾರೆ.

Ad
Ad
Nk Channel Final 21 09 2023
Ad