ಬೆಂಗಳೂರು: ನಟ, ರಾಜಕಾರಣಿ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರ ಅಳಿಯ ತಿಳಿಸಿದ್ದಾರೆ. ಇನ್ನು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವರಾಮ್ ಅವರನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿಯಾಗಿದ್ದಾರೆ.
ನಗರದ HCG ಆಸ್ಪತ್ರೆಗೆ ಭೇಟಿ ನೀಡಿದ ಯಡಿಯೂರಪ್ಪ ಅವರು, ಕೆ.ಶಿವರಾಮ್ ಅವರು ಬಿಜೆಪಿಯ ಹಿರಿಯ ಮುಖಂಡರು. ಅವ್ರಿಗೆ 70 ವರ್ಷ ವಯಸ್ಸಾಗಿದೆ. ಈಗ ಅವರನ್ನು ನೋಡಿಕೊಂಡು ಬಂದೆ. ಈ ಪರಿಸ್ಥಿತಿಯಲ್ಲಿ ಅವ್ರನ್ನ ನೋಡಿದ್ದು ನೋವು ತಂದಿದೆ.
ಅವರು ಮಾತನಾಡೋ ಪರಿಸ್ಥಿತಿಯಲ್ಲಿ ಇಲ್ಲ. ಬಹು ಅಂಗಾಂಗ ವೈಫಲ್ಯ ಹಾಗೂ ಹಾರ್ಟ್ ಅಟ್ಯಾಕ್ ಆಗಿದೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ.