ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 15 ಮಂದಿ ಸಜೀವ ದಹನಗೊಂಡಿರುವ ಘಟನೆಗೆ ರಾಜ್ಯ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

”ಆಂಧ್ರ ಪ್ರದೇಶದ ಕರ್ನೂಲ್ನ ಬೆಂಗಳೂರು – ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು.

ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ತಿಳಿಸಿದರು.