ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ನಿರ್ವಾಹಕ ಟಿಕೆಟ್ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದಿದೆ.
ತನ್ಜಿಲಾ ಇಸ್ಮಾಯಿಲ್ ಎಂಬ ಮಹಿಳೆ ಟಿಕೆಟ್ ಕೇಳಿದ್ದಾರೆ. ಈ ವೇಳೆ ಕಂಡಕ್ಟರ್, ಕೊಡ್ತಿನಿ ಇರಿ ಎಂದಿದ್ದಾನೆ. ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ರೊಚ್ಚಿಗೆದ್ದ ಕಂಡಕ್ಟರ್, ಹಲ್ಲೆ ನಡೆಸಿದ್ದಾನೆ. ಮಹಿಳೆ ಕೂಡ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354A ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಬೆಂಗಳೂರು | ಮಹಿಳೆಯ ಮೇಲೆ ಹಿಗ್ಗಾಮುಗ್ಗಾ ಹಲ್ಲೆಗೈದ @BMTC_BENGALURU ಕಂಡಕ್ಟರ್; ವಿಡಿಯೋ ವೈರಲ್
ಬಸ್ನಲ್ಲಿಯೇ ಹಲ್ಲೆ ಮಾಡಿ ಅಟ್ಟಹಾಸ. ಟಿಕೆಟ್ ವಿಚಾರವಾಗಿ ಹಲ್ಲೆ: ಇಂದು ಬೆಳಗ್ಗೆ 10 ಗಂಟೆಗೆ ನಡೆದ ಕೃತ್ಯ. ಗಟನೆಯ ದ್ರುಶ್ಯ ಮೊಬೈಲ್ನಲ್ಲಿ ಸೆರೆ.
ಸಿದ್ದಾಪುರ ಪೊಲೀಸ್ ಟಾಣೆಯಲ್ಲಿ FIR pic.twitter.com/FFRpiBLtiP
— ದಡಿಗ ಗಂಗವಾಡಿ | Ganga Dynasty (@dadigagangawadi) March 26, 2024