Bengaluru 23°C
Ad

ಬೆಂಗಳೂರು ಗ್ರಾಮಾಂತರದಲ್ಲಿ ಗೆಲುವಿನತ್ತ ಸಿ.ಎನ್​. ಮಂಜುನಾಥ್​

Manjunath

ಬೆಂಗಳೂರು: ದೇಶದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್​. ಮಂಜುನಾಥ್​ ಅವರು ಹಾಲಿ ಸಂಸದ ಹಾಗೂ ಕಾಂಗ್ರೆಸ್​ ಅಭ್ಯರ್ಥಿ ಡಿ.ಕೆ. ಸುರೇಶ್​ ವಿರುದ್ಧ ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಬೆಳಗ್ಗೆ 10.28ರ ಹೊತ್ತಿಗೆ ಕಾಂಗ್ರೆಸ್‌ನ ಡಿ.ಕೆ ಸುರೇಶ್‌ ಅವರಿಗಿಂತ ಮಂಜುನಾಥ್​ ಅವರು 73,000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇದೇ ಟ್ರೆಂಡ್​ ಮುಂದುವರಿದರೆ ಮಂಜುನಾಥ್​ ಅವರಿಗೆ ಸುಲಭ ಗೆಲುವು ಲಭಿಸಲಿದೆ. ಮಂಜುನಾಥ್​ ಅವರ ಮುನ್ನಡೆ ಅಂತರ ನಿರಂತರವಾಗಿ ಏರುತ್ತಲೇ ಇದೆ. ಬಹುತೇಕ ಮಂಜುನಾಥ್​ ಅವರಿಗೆ ಗೆಲುವು ಸುಲಭವಾಗಲಿದೆ ಎಂದು ಹೇಳಲಾಗುತ್ತಿದೆ.

ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರ ಅಳಿಯರಾಗಿರುವ ಮಂಜುನಾಥ್ ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಿದ್ದಾರೆ. ಜೆಡಿಎಸ್​ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಂಜುನಾಥ್​ ಹಾಲಿ ಸಂಸದ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ಸಹೋದರ ಡಿ.ಕೆ. ಸುರೇಶ್​ ವಿರುದ್ಧ ಪ್ರಚಂಡ ಮುನ್ನಡೆ ಸಾಧಿಸಿ, ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ.

Ad
Ad
Nk Channel Final 21 09 2023
Ad