News Karnataka Kannada
Thursday, May 09 2024
ಬೆಂಗಳೂರು

ಕರ್ನಾಟಕಕ್ಕೆ 1,020 ಹೊಸ ಬಸ್​ಗಳನ್ನು ಖರೀದಿಸಲು ಸಚಿವ ಸಂಪುಟ ಅಸ್ತು

Cabinet approves purchase of 1,020 new buses for Karnataka
Photo Credit : News Kannada

ಬೆಂಗಳೂರು: ರಾಜ್ಯದ ವಿವಿಧ ಸಾರಿಗೆ ನಿಗಮಗಳಿಗೆ 1,020 ಹೊಸ ಎಲೆಕ್ಟ್ರಿಕ್ ಬಸ್​​ಗಳನ್ನು ಖರೀದಿಸಲು ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಈ ಪೈಕಿ 320 ಎಲೆಕ್ಟ್ರಿಕ್ ಬಸ್​ಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 150 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಖರೀದಿಸಲಿದೆ.

ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಯನ್ನು ಪ್ರಾರಂಭಿಸಿದಾಗಿನಿಂದ, ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ (ಆರ್‌ಟಿಸಿ) ಸರಾಸರಿ ದೈನಂದಿನ ಆದಾಯವು ಏರಿಕೆಯಾಗಿದೆ.

ಮುಂದಿನ ದಿನಗಳಲ್ಲಿ ಬಿಎಂಟಿಸಿಗೆ 320 ಬಸ್​ಗಳನ್ನು ಒಟ್ಟು ವೆಚ್ಚ ಗುತ್ತಿಗೆ (ಜಿಸಿಸಿ) ಹಣಕಾಸು ಮಾದರಿಯಲ್ಲಿ ಖರೀದಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 100 ಕೋಟಿ ರೂ.ಗಳ ವೆಚ್ಚದಲ್ಲಿ 250 ಬಸ್ಸುಗಳು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 150 ಕೋಟಿ ರೂ.ಗಳ ವೆಚ್ಚದಲ್ಲಿ 350 ಬಸ್ಸುಗಳು ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 100 ಕೋಟಿ ರೂ.ಗಳ ವೆಚ್ಚದಲ್ಲಿ 250 ಬಸ್ಸುಗಳನ್ನು ಖರೀದಿಸಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು