Ad

ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ಮಾಡಿ ಅರ್ಹರಿಗೆ ನೀಡಿ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಪಿಎಲ್‌ ಕಾರ್ಡುದಾರರ ಸಂಖ್ಯೆ ಮಿತಿ ಮೀರಿದ್ದು, ಅನರ್ಹರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅರ್ಹರಿಗೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡುದಾರರ ಸಂಖ್ಯೆ ಮಿತಿ ಮೀರಿದ್ದು, ಅನರ್ಹರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅರ್ಹರಿಗೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

Ad
300x250 2

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು.

ರಾಜ್ಯದಲ್ಲಿ ಶೇ. 80ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು.

 

 

Ad
Ad
Nk Channel Final 21 09 2023
Ad