ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದ್ದ ಜನರಿಗೆ ಆಹಾರ ಇಲಾಖೆ ಶಾಕ್ ನೀಡಿದೆ. ಆಹಾರ ಇಲಾಖೆಯು ರಾಜ್ಯಾದ್ಯಂತ ಬರೋಬ್ಬರಿ 7,76,206 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

ರಾಜ್ಯದಲ್ಲಿ ಬರೋಬ್ಬರಿ 4.50 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.

ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ 14.50 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇವರು ಅಧಿಕ ಆದಾಯ ಹೊಂದಿದವರು ಮತ್ತು ಕುಟುಂಬ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ.

ಮೃತಪಟ್ಟವರ ಹೆಸರು ಮತ್ತು ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಬಳಸಿ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯುತ್ತಿರುವ ಅಘಾತಕಾರಿ ಸಂಗತಿಯೂ ಬೆಳಕಿಗೆ ಬಂದಿದೆ.

ಮುಂದಿನ ದಿನದಲ್ಲಿ ಇನ್ನಷ್ಟು ಕಾರ್ಯಾಚರಣೆ ನಡೆಸಿ ಅರ್ಹ ಫಲಾನುಭುವಿಗಳಿಗೆ ಯೋಜನೆ ದೊರೆಕಿಸಿಕೊಡುವ ಕುರಿತು ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ.