ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ನಿಂದ ಬಂದ ಪ್ರಯಾಣಿಕರೊಬ್ಬರಿಂದ 14.93 ಕೆ.ಜಿ ಹೈಡ್ರೋಫೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಜಪ್ತಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಆಗಮನ ವಿಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಿದ ಅಧಿಕಾರಿಗಳು ಪ್ರಯಾಣಿಕನ ಬ್ಯಾಗ್ಗಳಲ್ಲಿ ಅಡಗಿಸಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚಿದ್ದಾರೆ.
ಜಪ್ತಿ ಮಾಡಲಾದ ಮಾದಕ ವಸ್ತುವಿನ ಅಂದಾಜು ಮೌಲ್ಯ ₹5.23 ಕೋಟಿ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

