ಬೆಂಗಳೂರು: ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ ಆರೋಪದ ಹಿನ್ನಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಆದೇಶಿಸಿದ್ದಾರೆ.
ಈ ಹಿನ್ನಲೆ ಚುನಾವಣಾ ಅಧಿಕಾರಿ ಮಹಾಂತೇಶ್ ಅವರು ಖಾಸಗಿ ದೂರು ದಾಖಲಿಸಿದ್ದರು.
ಇದೀಗ ಏಪ್ರಿಲ್.30ರಂದು ಕೋರ್ಟ್ಗೆ ಹಾಜರಾಗುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶಿಸಿದೆ.