News Karnataka Kannada
Friday, May 10 2024
ಬೆಂಗಳೂರು

ತಾರಕಕ್ಕೇರಿದ ‘ಕಾವೇರಿ’ ಕಿಚ್ಚು: ಇಂದು ಸರ್ವಪಕ್ಷಗಳ ಸಭೆ ಕರೆದ ಸರ್ಕಾರ

Cm Siddaramaiah celebrates decade of ksheera bhagya scheme
Photo Credit : News Kannada

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸೋದನ್ನ ತಕ್ಷಣ ನಿಲ್ಲಿಸಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಮಳೆಯಿಲ್ಲದೇ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲ. ಇಂಥದ್ರಲ್ಲೂ 19.5 ಟಿಎಂಸಿ ನೀರು ತಮಿಳುನಾಡಿಗೆ ಹರಿಸಲಾಗಿದೆ ಎಂದು ಬಿಜೆಪಿ ನಾಯಕರು ಹಿಗ್ಗಾಮುಗ್ಗ ಹರಿಹಾಯ್ದಿದ್ದಾರೆ. ವಿಪಕ್ಷಗಳ ಆಕ್ರೋಶ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಕಾವೇರಿ ಸಮಸ್ಯೆಗೆ ಪರಿಹಾರ ಹುಡುಕಲು ಸರ್ವಪಕ್ಷಗಳ ಸಭೆ ಕರೆದಿದೆ.

ಸದ್ಯ ಜಲಾಶಯಗಳಲ್ಲಿ ನೀರು ಇಲ್ಲದಿದ್ರೂ ತಮಿಳುನಾಡಿಗೆ ನೀರು ಹರಿಸುವ ಮೂಲಕ ಸರ್ಕಾರ ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಮತ್ತೊಂದೆಡೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ. ಕಾವೇರಿ, ಮಹದಾಯಿ ಸೇರಿ ರಾಜ್ಯದ ಜಲವಿವಾದಗಳ ಬಗ್ಗೆ ಚರ್ಚೆ ನಡೆಸಲಿದೆ.

ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಹೆಚ್​.ಡಿ.ಕುಮಾರಸ್ವಾಮಿಗೆ ಸರ್ಕಾರ ಆಹ್ವಾನ ನೀಡಿದೆ. ಇನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೂ ಆಹ್ವಾನ ನೀಡಲಾಗಿದ್ದು ಅನಾರೋಗ್ಯದ ಕಾರಣ ಭಾಗಿಯಾಗುವುದು ಅನುಮಾನ ಎನ್ನಲಾಗಿದೆ. ಸರ್ವಪಕ್ಷಗಳ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ, ರಾಜ್ಯದ ನಿಲುವು ಏನಾಗಿರಬೇಕು ಎಂಬ ಬಗ್ಗೆ ವಿಪಕ್ಷಗಳಿಂದ ಸಲಹೆ ಪಡೆದು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು