ಕಾವೇರಿ ನದಿ ನೀರು ವಿವಾದ: ಕಾನೂನು ತಜ್ಞರೊಂದಿಗೆ ಸಭೆ ಬಳಿಕ ಡಿಕೆಶಿ ಹೇಳಿದ್ದೇನು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಭುಗಿಲೆದ್ದಿದೆ. ತಮಿಳುನಾಡಿಗೆ ರಾಜ್ಯಸರ್ಕಾರ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕಾವೇರಿ ಕೊಳ್ಳದ ರೈತರಿಂದ ಪ್ರತಿದಿನ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ ಶಿವಕುಮಾರ್‌ ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ತಜ್ಞರು ಮತ್ತು ಕರ್ನಾಟಕದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಇಂದು ನಮ್ಮ ಎಲ್ಲಾ ಕಾನೂನು ತಜ್ಞರೊಂದಿಗೆ ಸಭೆ ನಡೆಸಿದ್ದೇವೆ. ಈಗ ಇಡೀ ತಂಡ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲರನ್ನು ಭೇಟಿ ಮಾಡಲು ಹೊರಟಿದೆ. ತಮಿಳುನಾಡಿಗೆ 5,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಮಗೆ ಆದೇಶ ನೀಡಿದೆ. ನೀರು ಇಲ್ಲದಿರುವುದು ಕರ್ನಾಟಕಕ್ಕೆ ದೊಡ್ಡ ನೋವಾಗಿದೆ. ಕರ್ನಾಟಕದ ರೈತರು ಹಾಗೂ ಅವರ ಭಾವನೆಗಳನ್ನು ಗೌರವಿಸುತ್ತಾರೆ ಎಂಬ ವಿಶ್ವಾಸವಿಸಿದೆ ಎಂದರು.

ನಾವೂ ಕರ್ನಾಟಕದ ರೈತರಂತೆ ತಮಿಳುನಾಡಿನ ರೈತರಿಗೂ ಗೌರವ ನೀಡುತ್ತೇವೆ. ಆದರೆ ಕರ್ನಾಟಕದಲ್ಲಿ ಮಳೆಯಿಲ್ಲದೆ ಭೀಕರ ಬರಗಾಲದ ಸ್ಥಿತಿಯಿದೆ. ಈ ಸಂದರ್ಭ ಆ ಪ್ರಮಾಣದಲ್ಲಿ ನೀರು ಬಿಡುಗಡೆ ಕಷ್ಟ ಎಂದರು. ಇದೇ ಕಾರಣಕ್ಕೆ ಮೇಕೆದಾಟು ಯೋಜನೆ ಅನುಷ್ಠಾನಗೊಳ್ಳಬೇಕು ಎಂದು ನಾವು ಒತ್ತಾಯ ಮಾಡುತ್ತಿರುವುದು. ಈ ಯೋಜನೆಯಿಂದ ಎರಡೂ ರಾಜ್ಯದ ನೀರಿನ ತೊಂದರೆ ನೀಗಲಿದೆ ಎಂದರು.

Ashika S

Recent Posts

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

7 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

17 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

25 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

42 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

48 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

1 hour ago