ಬೆಂಗಳೂರು: ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್ ಆಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಫೋಟೋದಲ್ಲಿ ಆರೋಪಿ ದರ್ಶನ್ ಜೊತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಕೂಡ ಇದ್ದನು. ಇದೀಗ, ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.
ರೌಡಿಶೀಟರ್ ವಿಲ್ಸನ್‌ಗಾರ್ಡನ್ ನಾಗ ಜೈಲಿನಿಂದಲೇ ಧಮ್ಕಿ ಹಾಕುತ್ತಿದ್ದನು. ಈ ವಿಚಾರ ತಿಳಿದ ಸಿಸಿಬಿ ಅಧಿಕಾರಿಗಳು ಶನಿವಾರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದಾರೆ. ತಪಾಸಣೆ ವೇಳೆ ವಿಲ್ಸನ್ ಗಾರ್ಡನ್ ನಾಗ ಮತ್ತು ಆತನ ಸಹಚರರ ಸುಮಾರು 18 ಮೊಬೈಲ್‌ಫೋನ್ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ಮೊಬೈಲ್ ಜೊತೆಗೆ ಡ್ರಗ್ಸ್ ಹಾಗೂ ಹಣವನ್ನೂ ಸೀಜ್ ಮಾಡಿದ್ದಾರೆ.

