Ad

ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ಆತ್ಮಹತ್ಯೆಗೆ ಶರಣು

ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರು: ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ರಾಮನಗರ ಜಿಲ್ಲೆಯ ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ವಿರುದ್ಧ ಆರೋಪ ಕೇಳಿಬಂದಿದೆ. ಸದ್ಯ ಪ್ರಕರರಣದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ.

 

Ad
Ad
Nk Channel Final 21 09 2023