ಬೆಂಗಳೂರು: ಸ್ಯಾಂಡಲ್​​ವುಡ್​​ ನಟ ಧನ್ವೀರ್ ಗೌಡ​ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಗೆಳತಿ ಪವಿತ್ರಾ ಗೌಡಗೆ ಆಶ್ಲೀಲ ಸಂದೇಶ ಕಳುಹಿಸಿದ್ದಾನೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾರೆ ಎನ್ನವ ಆರೋಪದ ಮೇಲೆ  ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.

ದರ್ಶನ್ ಅವರನ್ನು ಜೈಲಿನಲ್ಲಿ ಕೆಟ್ಟದಾಗಿ ನೋಡಿಕೊಳ್ಳಲಾಗುತ್ತಿದೆ. ಇಲ್ಲಿ ಅಪರಾಧಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಜೈಲಿನಲ್ಲಿ ಒಬ್ಬರಿಗೆ ಒಂದೊಂದು ನ್ಯಾಯ. ದರ್ಶನ್​ ಅವರನ್ನು ಮಾತ್ರ ಕೆಟ್ಟದಾಗಿ ನೋಡಿಕೊಳ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅದರ ಬೆನ್ನಲ್ಲೇ ರಾಜಾತಿಥ್ಯದ ವಿಡಿಯೋಗಳು ವೈರಲ್ ಆಗಿವೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಸ್ಯಾಂಡಲ್​ವುಡ್ ನಟ ಧನ್ವೀರ್​​ ಅವರತ್ತ ಸಿಸಿಬಿ ಅಧಿಕಾರಿಗಳು ಮುಖ ಮಾಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ದರ್ಶನ್ ಆಪ್ತ, ನಟ ನಿನ್ನೆ ನಟ ಧನ್ವೀರ್​ನನ್ನು ಕರೆಸಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಧನ್ವೀರ್​, ದರ್ಶನ್​​ಗೆ ತುಂಬಾನೇ ಆಪ್ತರು. ಆಗಾಗ ಜೈಲಿಗೆ ಹೋಗಿ ಮಾತಾಡಿಸಿಕೊಂಡು ಬರುತ್ತಾರೆ.  ಜೈಲಿನ ವಿಡಿಯೋನ ದರ್ಶನ್ ಆಪ್ತ ಧನ್ವೀರ್ ರಿಲೀಸ್ ಮಾಡಿರೋ ಅನುಮಾನ ಇದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಧನ್ವೀರ್ ವಿಚಾರಣೆ ನಡೆಸಲಾಗಿದೆ. ಆದರೆ ಅವರ ಬಳಿ ಆ ರೀತಿಯ ಯಾವುದೇ ವಿಡಿಯೋ ಪತ್ತೆ ಆಗಿಲ್ಲ. ಹಾಗಾಗಿ ವಿಚಾರಣೆ ನಡೆಸಿ ಅವರನ್ನು ಸಿಸಿಬಿ ಪೊಲೀಸರು ಕಳುಹಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.