ಬೆಂಗಳೂರು: ಶಂಕಿತ ಉಗ್ರರ ಮಾಸ್ಟರ್ ಮೈಂಡ್ ಜುನೈದ್ನನ್ನು ಪತ್ತೆಹಚ್ಚಲು ಇಂಟರ್ಪೋಲ್ ಮೂಲಕ ಲುಕ್ ಔಟ್ ನೋಟಿಸ್ಗೆ ಸಿಸಿಬಿ ಪೊಲೀಸರು ತಯಾರಿ ನಡೆಸಿದ್ದಾರೆ. ಆರೋಪಿ ವಿದೇಶಕ್ಕೆ ತೆರಳಿರುವ ಶಂಕೆ ಇದ್ದು ಆತನನ್ನು ಬಂಧಿಸಲು ಸೂಕ್ತ ಕ್ರಮಕ್ಕೆ ಪೊಲೀಸರು ಈಗ ಮುಂದಾಗಿದ್ದಾರೆ.
ಅಪರಾಧ ಕ್ರತ್ಯಗಳಲ್ಲಿ ತೊಡಗಿಕೊಂಡಿದ್ದ ಜುನೈದ್ ಕಳೆದ ಎರಡು ವರ್ಷಗಳ ಹಿಂದೆ ಜೈಲಿನಿಂದ ಹೊರಬಂದಿದ್ದ. ಬಳಿಕ ಜೈಲಿನಿಂದ ಹೊರ ಬಂದು ದುಬೈಗೆ ತೆರಳಿರುವ ಅನುಮಾನ ವ್ಯಕ್ತವಾಗಿದೆ. 2021ರಲ್ಲಿ ದುಬೈಗೆ ಪ್ರಯಾಣ ಮಾಡಿರುವ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.
ಈ ಬಗ್ಗೆ ರಾಷ್ಟ್ರೀಯ ತನಿಖಾ ದಳಕ್ಕೆ ಮಾಹಿತಿ ನೀಡಿರುವ ಸಿಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ ಶೀಘ್ರ ಲುಕ್ ಔಟ್ ನೋಟಿಸ್ ಜಾರಿಗೊಳಿಸಲು ಸಿದ್ಧತೆ ನಡೆಸಿದ್ದಾರೆ. ಜುನೈದ್ ಬೆಂಗಳೂರಿನ ಶಂಕಿತ ಉಗ್ರರಿಗೆ ಏನೆಲ್ಲ ಸಹಾಯಕ ಬೇಕೋ ಅದನ್ನು ವಿದೇಶದಲ್ಲಿದ್ದುಕೊಂಡು ಸಹಾಯ ಮಾಡುತ್ತಿದ್ದ ಎಂದು ಸಿಸಿಬಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಹೀಗಾಗಿ ಜುನೈದ್ ಪತ್ತೆಗೆ ಸಿಸಿಬಿ ಕಾರ್ಯಚರಣೆಗಿಳಿದಿದೆ.