ಬೆಂಗಳೂರು: ಬೆಂಗಳೂರಿನ ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುತ್ತೇನೆಂದು ವಂಚಿಸಿದ ಆರೋಪದಲ್ಲಿ ಜೈಲು ಸೇರಿರುವ ಚೈತ್ರಾ ಕುಂದಾಪುರ ಮೇಲೆ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆ ಮಾಡಿರುವ ಘಟನೆ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.
ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮಹಿಳಾ ವಿಚಾರಣಾಧೀನ ಕೈದಿಗಳ ಬ್ಯಾರಕ್ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಕುಂದಾಪುರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಮತ್ತು ಮೂವರು ಸ್ಥಳೀಯ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸರಿಗೆ ಚೈತ್ರಾ ಕುಂದಾಪುರ ದೂರು ನೀಡಿದ್ದಾರೆ.