ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿದ್ದಾರೆ ಎಂಬ ಗಂಭೀರ ಆರೋಪವೊಂದು ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಕೇಳಿ ಬಂದಿದೆ.
ಹೀಗಾಗಿ ಬೆಂಗಳೂರು ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಮತ್ತಿಡೀ ಗ್ಯಾಂಗ್ ಅನ್ನು ಬಂಧಿಸಿ ಬಳಿಕ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದರು.
ಇನ್ನು, ಕೇಸ್ ವಿಚಾರಣೆ ನಡೆಸಿದ ಬಳಿಕ ಮಹತ್ವದ ತೀರ್ಪು ನೀಡಿದ ಮೂರನೇ ಎಸಿಎಂಎಂ ಕೋರ್ಟ್ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಅನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಸೇರಿ 7 ಮಂದಿ ಆರೋಪಿಗಳಿಗೆ 14 ದಿನಗಳ ಕಾಲ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.