ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ ದೃಷ್ಟಿಯಿಂದ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೇ ರಾಜ್ಯದಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಹೊರ ರಾಜ್ಯಗಳ ಶಿಲ್ಪಿಗಳ ಮೇಲೆ ಅವಲಂಬಿತರಾಗಿದ್ದು, ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದರು.
ಚಾಮುಂಡೇಶ್ವರಿ ದೇವಿ ಸನ್ನಿಧಾನ ಅಭಿವೃದ್ಧಿಗೆ ಹಾಗೂ ವಿವಿಧ ಮೂಲ ಸೌಕರ್ಯ ಒದಗಿಸಲು ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಪ್ರಸಾದ್ ಯೋಜನೆಯಡಿ 45.70 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದೆಯನ್ನು ನೀಡಿತ್ತು.