Ad

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಹಾಗೂ ಮಲೆನಾಡಿನಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು: ಕರಾವಳಿ ಹಾಗೂ ಮಲೆನಾಡಿನಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Ad
300x250 2

ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಗದಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಸುಮಾರು 31 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಗುಡುಗು ಸಹಿತ ಭಾರಿ ಮಳೆಯಾಗುವುದರ ಜತೆಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಕೊಡಗು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Ad
Ad
Nk Channel Final 21 09 2023
Ad