Bengaluru 21°C
Ad

ದರ್ಶನ್ ಚಾರ್ಜ್‌ಶೀಟ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ?

Parmeshwar

ಬೆಂಗಳೂರು: ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾದ ವಿಚಾರಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು ಎಂದು ದರ್ಶನ್ ಅವರು ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.

ಈ ಅರ್ಜಿಗೆ ಸಂಬಂಧಿಸಿದಂತ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಚಾರ್ಜ್​ಶೀಟ್ ಅನ್ನೋದು ಸಾರ್ವಜನಿಕ ಅರ್ಜಿ. ಅದನ್ನು ಎಲ್ಲಾ ಆರೋಪಿಗಳ ವಕೀಲರಿಗೆ ನೀಡಲಾಗುತ್ತದೆ. ಈ ಬಗ್ಗೆ ಕೋರ್ಟ್​ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ನೋಡಬೇಕಿದೆ’ ಎಂದಿದ್ದಾರೆ ಪರಮೇಶ್ವರ್.

ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ.‌ ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ ಎಂದರು.

Ad
Ad
Nk Channel Final 21 09 2023