ಬೆಂಗಳೂರು: ಭಾನುವಾರ ರಾಮನವಮಿ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಎಂಪಿಯ ಪಶುಪಾಲನಾ ವಿಭಾಗ ಇಂದು (ಏಪ್ರಿಲ್ 04) ಬಿಬಿಎಂಪಿಯ ಪಶುಪಾಲನಾ ವಿಭಾಗ ಆದೇಶ ಹೊರಡಿಸಿದೆ.
ರಾಮನವಮಿ ಹಬ್ಬದಂದು ಕುರಿ, ಕೋಳಿ, ಮೀನು, ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

