ಚಿಕ್ಕಬಳ್ಳಾಪುರ

ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ: ಒಬ್ಬನ ಬಂಧನ

ಚಿಂತಾಮಣಿ : ನಗರದ ಬಂಬೂಬಜಾರ್‌ ಮಟನ್ ಸ್ಟಾಲ್ ರಸ್ತೆಯಲ್ಲಿ ಡೆಲ್ಲಿ ಕ್ಯಾಪಿಟಲ್ ಮತ್ತು ಪಂಜಾಬಿ ಕಿಂಗ್ಸ್ ಇಲೆವನ್‌ ತಂಡದ ನಡುವಿನ ಐಪಿಎಲ್‌ ಕ್ರಿಕೆಟ್ ಆಟವನ್ನು ಮೊಬೈಲ್‌ನಲ್ಲಿ ವೀಕ್ಷಿಸಿ ಬೆಟ್ಟಿಂಗ್ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಅಮ್ಜದ್ ಖಾನ್ ಬಂಧಿತ. ಬಬ್ಲೂ ಎಂಬಾತ ಪರಾರಿಯಾಗಿದ್ದು, ಈ ಇಬ್ಬರೂ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದವರು. ಸ್ಥಳೀಯ ಮಾಂಸದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿದಿನ ಮೊಬೈಲ್ ಲಿಂಕ್ ಮೂಲಕ ಹಣ ಕಟ್ಟಿ ಬೆಟ್ಟಿಂಗ್‌ ದಂಧೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ₹ 500 ನಗದು ಮತ್ತು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಇನ್‌ಸ್ಪೆಕ್ಟರ್ ವೈ.ಆರ್. ರಂಗಶಾಮಯ್ಯ ನೇತೃತ್ವದಲ್ಲಿ ಸಿಬ್ಬಂದಿಯಾದ ಕೃಷ್ಣಪ್ಪ, ಸುರೇಶ್, ವೇಣು ತಂಡ ದಾಳಿ ನಡೆಸಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gayathri SG

Recent Posts

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

4 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

54 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 hours ago