ಕೇರಳದ ಪ್ರಯಾಣಿಕರಿಗೆ ಕಡ್ಡಾಯ ಸಂಸ್ಥಿಕ ಕ್ವಾರಂಟೈನ್ : ಡಾ. ಕೆ. ಸುಧಾಕರ್

ಚಿಕ್ಕಬಳ್ಳಾಪುರ : ಕೇರಳದಿಂದ  ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಜಿಲ್ಲೆಗಳಲ್ಲಿ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುವುದು. ಪ್ರತಿ ದಿನ ಗಡಿ ಜಿಲ್ಲೆಗಳಿಗೆ ಬರುವ ಜನರಿಗೆ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಲಾಗುವುದು” ಎಂದರು.
“ಕೇರಳದಿಂದ ಪ್ರತಿ ದಿನ ಅನೇಕರು ಗಡಿ ಜಿಲ್ಲೆಗಳಿಗೆ ಬರುತ್ತಾರೆ. ಶಿಕ್ಷಣ, ಆರೋಗ್ಯ ಸೇವೆ, ನಿತ್ಯದ ವಹಿವಾಟುಗಳಿಗೆ ದಕ್ಷಿಣ ಕನ್ನಡ, ಉಡುಪಿ ಮೊದಲಾದ ಜಿಲ್ಲೆಗಳಿಗೆ ಜನರು ಬರುತ್ತಾರೆ. ಇನ್ನು ವಿಮಾನ, ರೈಲುಗಳ ಮೂಲಕ ಬರುವವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕಿದೆ. ಇದಕ್ಕಾಗಿ ಕೋವಿಡ್ ಮಾರ್ಗಸೂಚಿ ರೂಪಿಸಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.
Raksha Deshpande

Recent Posts

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

10 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

28 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

36 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

55 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

9 hours ago