News Karnataka Kannada
Tuesday, April 30 2024
ಚಿಕ್ಕಬಳ್ಳಾಪುರ

ಕೊರಟಗೆರೆ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಬಸ್

Accident.
Photo Credit : News Kannada

ಕೊರಟಗೆರೆ: ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ವ್ಯಾಪ್ತಿಯ ಕಾಶಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಚಾಲಕನ ಅಜಾಗರೂಕತೆಯಿಂದ ಸಾರಿಗೆ ಬಸ್ ಮರಕ್ಕೆ ಗುದ್ದಿದ ಪರಿಣಾಮ ರೈತ ಹಾಗೂ ಭಿಕ್ಷುಕ ಸಾವನ್ನಪ್ಪಿ 10 ಜನ ಗಾಯಗೊಂಡಿರುವ ಘಟನೆ  ಸಂಭವಿಸಿದೆ.

ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರ್ಕಾರಿರಿ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಬಸ್ ಚಾಲಕ ಅಪಘಾತವಾದ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ನಿರ್ವಾಹಕನ ಕೈಕಾಲು ಮುರಿದಿವೆ. ಬಸ್‍ನಲ್ಲಿದ್ದ 10 ಜನರಿಗೆ ಗಾಯವಾಗಿ ಕೊರಟಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾಶಪುರದ ಮುಖ್ಯರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಭಿಕ್ಷುಕನ ಮೇಲೆ ಬಸ್ ಹರಿದು ಆತ ಸ್ಥಳದಲ್ಲಿಯೇ ಮೃತಪಟ್ಟರೆ, ನಂತರ ಅದೇ ವೇಗವಾಗಿ ತೆರಳಿದ ಬಸ್ ರೈತ ಗೋಪಾಲನಾಯ್ಕನ ಮೇಲೆಯೂ ಹರಿದ ಪರಿಣಾಮ ರೈತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿರುವ ಕೊರಟಗೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು